ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಬಿಜೆಪಿ ಸರ್ಕಾರದ ಜೊತೆ ಮೈತ್ರಿ ಮಾಡಿಕೊಂಡ ಹೊಸ ಸರ್ಕಾರ ರಚನೆ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.
ರಾಜೀನಾಮೆ ಸಲ್ಲಿಸಿದ ಬಳಿಕ ಮಾತನಾಡಿದ ಅವರು ‘ಬಿಹಾರದಲ್ಲಿ ಹಳೇ ಘಟಬಂಧನ್ ಸರ್ಕಾರ ರಚನೆ ಸಮಾಪ್ತಿ ಮಾಡಲಾಗಿದೆ, ಬಿಹಾರದಲ್ಲಿ ಹೊಸ ಘಟಬಂಧನ್ ಸರ್ಕಾರ ರಚನೆಯಾಗಲಿದೆ. ಸರ್ಕಾರ ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿದ್ದೇನೆ, ಸರ್ಕಾರ ವಿಸರ್ಜಿಸುವಂತೆ ರಾಜ್ಯಪಾಲರಿಗೂ ಹೇಳಿದ್ದೇನೆ, ಈಗ ನಾನು ಹೊಸ ಮೈತ್ರಿಗೆ ಸೇರುತ್ತಿದ್ದೇನೆ ಎಂದು ನಿತೀಶ್ ಕುಮಾರ್ ಬಿಹಾರದ ಪಾಟ್ನಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಲಾಲು ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮತ್ತು ಕಾಂಗ್ರೆಸ್ ಜೊತೆಗಿನ 18 ತಿಂಗಳ ಆಡಳಿತ ಮೈತ್ರಿಯನ್ನು ಕೊನೆಗೊಳಿಸುವ ಮೂಲಕ ನಿತೀಶ್ ಕುಮಾರ್ ಭಾನುವಾರ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಬಿಜೆಪಿಯ ಬೆಂಬಲದೊಂದಿಗೆ, ಅವರು ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.ಎಲ್ಲಾ ಪಕ್ಷಗಳು ನಿರ್ಣಾಯಕ ಸಭೆಗಳನ್ನು ಯೋಜಿಸಿರುವುದರಿಂದ ರಾಜ್ಯವು ಹೈವೋಲ್ಟೇಜ್ ರಾಜಕೀಯ ನಡೆಗಳಿಗೆ ಸಾಕ್ಷಿಯಾಗಲು ಸಜ್ಜಾಗಿದೆ.