HomeKarnatakaBREAKING : ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ವಿವಾದ : ಧ್ವಜಸ್ಥಂಭ ಹತ್ತಿ ಫ್ಲೆಕ್ಸ್ ಕಟ್ಟಿದ...

BREAKING : ಕೆರಗೋಡಿನಲ್ಲಿ ತಾರಕಕ್ಕೇರಿದ ಹನುಮ ಧ್ವಜ ವಿವಾದ : ಧ್ವಜಸ್ಥಂಭ ಹತ್ತಿ ಫ್ಲೆಕ್ಸ್ ಕಟ್ಟಿದ ಮಹಿಳೆಯರು

ಮಂಡ್ಯ : ಜಿಲ್ಲೆಯ ಕೆರಗೋಡಿನಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಮಹಿಳೆಯರು ಧ್ವಜಸ್ಥಂಭ ಹತ್ತಿ ಫ್ಲೆಕ್ಸ್ ಕಟ್ಟಿದ್ದಾರೆ.

ಕೆರಗೋಡು ಗ್ರಾಮದಲ್ಲಿ 108 ಅಡಿ ಎತ್ತರದಲ್ಲಿದ್ದ ಹನುಮಧ್ವಜವನ್ನು ಪೊಲೀಸರು ಕೆಳಗಿಳಿಸಿದ್ದಾರೆ. ಇದರಿಂದ ಪ್ರತಿಭಟನೆಯ ಜೋರಾಗಿದ್ದು, ಜಿಲ್ಲಾಡಳಿತ ಕೆರಗೋಡು ಗ್ರಾಮದಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿದೆ. ಹನುಮಧ್ವಜವನ್ನು ಕೆಳಗಿಳಿಸಿದ ನಂತರ ಹೋರಾಟಗಾರರು, ಮಹಿಳೆಯರು ಧ್ವಜಸ್ಥಂಭ ಹತ್ತಿ ಫ್ಲೆಕ್ಸ್ ಕಟ್ಟಿದ್ದಾರೆ. ಹನುಮ ಧ್ವಜ ಹೋರಾಟ ತೀವ್ರಗೊಂಡಿದ್ದು, ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ ಬಿಗಿ ಭದ್ರತೆ ವಹಿಸಿದ್ದಾರೆ. ಹೋರಾಟಗಾರರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಕೂಡ ಮಾಡಿದ್ದಾರೆ.  ಕೆಲವೇ ಹೊತ್ತಿನಲ್ಲಿ ಘಟನಾ ಸ್ಥಳಕ್ಕೆ ಬಿಜೆಪಿ ನಿಯೋಗ ಕೂಡ ಧಾವಿಸಲಿದೆ.

ಅಯೋಧ್ಯೆಯಲ್ಲಿ ಜನವರಿ 22ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಬೃಹತ್ ಹನುಮ ಧ್ವಜವನ್ನು ಹಾರಿಸಲಾಗಿತ್ತು. ನಂತರ ಧ್ವಜ ತೆರವಿಗೆ ಅಧಿಕಾರಿಗಳು ಮುಂದಾದ ಹಿನ್ನೆಲೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಭಾರಿ ವಿರೋಧದ ನಡುವೆ ಹನುಮ ಧ್ವಜವನ್ನು ತೆರವುಗೊಳಿಸಲಾಗಿದ್ದು, ಕೆರಗೋಡು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular