ವಿಜಯಪುರ: ಪರಿಸರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸಿದ್ಧಶ್ರೀ ಸಹಕಾರಿ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್ ನೀಡಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್, ಕಾನೂನು ಪ್ರಕಾರ ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮತನಾಡಿದ ಸಚಿವರು, ಯತ್ನಾಳ್ ಅವರದ್ದೇ ಆಗಿರಲಿ, ನನ್ನದೇ ಆಗಿರಲಿ ಅಥವಾ ಬೇರೆಯವರದ್ದೇ ಆಗಿರಲಿ, ನಿಯಮ ಉಲ್ಲಂಘನೆಯಾಗಿದ್ದರೆ ಕಾನೂನು ಪ್ರಕಾರ ಕೈಗೊಳ್ಳುತ್ತಾರೆ. ಒಂದು ವೇಳೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿರುವ ನೋಟಿಸ್ ಸರಿ ಇಲ್ಲ ಎನ್ನುವುದದರೆ ನ್ಯಾಯಾಲಯದ ಮೊರೆ ಹೋಗಲಿ ಎಂದು ಹೇಳಿದ್ದಾರೆ.
ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ನಮ್ಮವರಲ್ಲ, ಅವರು ಬಿಜೆಪಿ ಅವಧಿಯಲ್ಲಿ ನೇಮಕಗೊಂಡವರು. ಹಾಗಾಗಿ ಯತ್ನಾಳ್ ಕಾರ್ಖಾನೆಗೆ ನೋಟಿಸ್ ನೀಡಿದ ವಿಚಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎನ್ನುವುದು ಸುಳ್ಳು. ಇದರಲ್ಲಿ ಬಿಜೆಪಿಯವರದ್ದೇ ಕೈವಾಡ ಇದೆ ಎಂದು ಹೇಳಿದರು.