HomeIndiaಮೆಟ್ರೋ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ: SHOCKING VIDEO

ಮೆಟ್ರೋ ರೈಲಿನ ಮುಂದೆ ಹಾರಿ ವ್ಯಕ್ತಿ ಆತ್ಮಹತ್ಯೆ: SHOCKING VIDEO

ನವದೆಹಲಿ: ದೆಹಲಿಯ ಐಎನ್‌ಎ ಮೆಟ್ರೋ ನಿಲ್ದಾಣದಲ್ಲಿ ಶನಿವಾರ ರಾತ್ರಿ ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವ್ಯಕ್ತಿಯೊಬ್ಬರು ಮೆಟ್ರೋ ಮುಂದೆ ಜಿಗಿದ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿ(ಪಿಸಿಆರ್) ಕರೆ ಸ್ವೀಕರಿಸಿದ್ದಾರೆ. ಮೆಟ್ರೋ ನಿಲ್ದಾಣದಲ್ಲಿ ಕಾದು ಕುಳಿತಿದ್ದ ಪ್ರಯಾಣಿಕರು ಕಣ್ಣೆದುರೇ ನಡೆದ ಘಟನೆಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.

ಪೊಲೀಸರು ನಿಲ್ದಾಣವನ್ನು ತಲುಪಿ ಪರಿಶೀಲಿಸಿದಾಗ ಆ ವ್ಯಕ್ತಿ ಟ್ರ್ಯಾಕ್ ಮೇಲೆ ಶವವಾಗಿ ಬಿದ್ದಿರುವುದು ಪತ್ತೆಯಾಗಿದೆ. ವ್ಯಕ್ತಿ ನಿಲ್ದಾಣದ ಪ್ಲಾಟ್‌ಫಾರ್ಮ್ ಸಂಖ್ಯೆ 2 ರಲ್ಲಿ ಸಮಯಪುರ ಬದ್ಲಿ ಕಡೆಗೆ ಮೆಟ್ರೋ ಟ್ರ್ಯಾಕ್‌ಗೆ ಹಾರಿರುವುದು ಕಂಡುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರನ್ನು ರಾಷ್ಟ್ರ ರಾಜಧಾನಿಯ ಸತ್ಯ ನಿಕೇತನ ಪ್ರದೇಶದ ನಿವಾಸಿ 30 ವರ್ಷದ ಅಜಿತೇಜ್ ಎಂದು ಗುರುತಿಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ ಸೆಕ್ಷನ್ 174 ರ ಅಡಿಯಲ್ಲಿ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

https://twitter.com/MithilaWaala/status/1751461721959772213

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular