ಚಿತ್ರದುರ್ಗ : ಅಂಬೇಡ್ಕರ್ ನೀಡಿದ ಸಂವಿಧಾನವೇ ದೇಶದ ಭದ್ರ ಬುನಾದಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಚಿತ್ರದುರ್ಗದಲ್ಲಿ ಇಂದು ಹಮ್ಮಿಕೊಂಡಿದ್ದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಪಾಲ್ಗೊಂಡು ಮಾತನಾಡಿದರು.
ಮರಕ್ಕೆ ಬೇರು ಎಷ್ಟು ಮುಖ್ಯವೋ ಮನುಷ್ಯನಿಗೆ ನಂಬಿಕೆ ಕೂಡ ಅಷ್ಟೇಮುಖ್ಯ. ಅದೇರೀತಿ ಕಾಂಗ್ರೆಸ್ ಪಕ್ಷದ ಮೇಲೆ ಕನ್ನಡಿಗರು ನಂಬಿಕೆ ಇಟ್ಟು ಮತ ನೀಡಿದ್ದಾರೆ. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಆ ನಂಬಿಕೆ ಉಳಿಸಿಕೊಂಡಿದ್ದೇವೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನವೇ ದೇಶದ ಭದ್ರ ಬುನಾದಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

