HomeKarnatakaಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ.

ಅರುಣ್ (28) ಮೃತ ದುರ್ದೈವಿ. ಕ್ಯಾಬ್ ಜೆಮಿನಿ ಕಂಪನಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಅರುಣ್, ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ವಾಪಾಸ್ ಆಗುತ್ತಿದ್ದಾಗ ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ಟಿಪ್ಪರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಕುಮಾರಸ್ವಾಮಿ ಲೇಔಟ್ ಸಂಚಾರಿ ಠಾಣೆ ಪೊಲೀಸರು ಟಿಪ್ಪರ್ ಚಾಲಕನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular