HomeKarnatakaBREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

BREAKING: LPG ಸಿಲಿಂಡರ್ ಸ್ಪೋಟ; ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯ

ಬೆಳಗಾವಿ: ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ನಗರದ ಬಸವನಗಲ್ಲಿಯಲ್ಲಿ ಘಟನೆ ನಡೆದಿದೆ.

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಹಚ್ಚುವಾಗ ಲೀಕ್ ಆಗಿ ಸ್ಪೋಟ ಸಂಭವಿಸಿದೆ. ಒಂದೇ ಕುಟುಂಬದ ಐವರು ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಲಲಿತ ಭಟ್(48), ಮೋಹನ ಭಟ್(56), ಕಮಲಾಕ್ಷಿ ಭಟ್(80) ಹೇಮಂತ್ ಭಟ್(27), ಗೋಪಿಕೃಷ್ಣ ಭಟ್(84) ಗಾಯಗೊಂಡಿದ್ದಾರೆ. ಖಡೇ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗ್ಯಾಸ್ ಲೀಕ್ ಆಗಿದ್ದನ್ನು ಗಮನಿಸದೇ ಸ್ಟವ್ ಹಚ್ಚಲು ಲೈಟರ್ ಆನ್ ಮಾಡ್ತಿದ್ದಂತೆ ಬೆಂಕಿ ತಗುಲಿ ಸ್ಪೋಟ ಸಂಭವಿಸಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular