![](https://kannadadunia.com/wp-content/uploads/2022/04/bomb-blast-story-fb_647_.jpeg)
ಬೆಳ್ತಂಗಡಿ : ಬೆಳ್ತಂಗಡಿ ಸಮೀಪದ ಗೋಳಿಯಂಗಡಿ ಹತ್ತಿರದ ಕಡ್ ತ್ಯಾರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಸ್ಪೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ.
ಪಟಾಕಿ ತಯಾರಿಕಾ ಘಟಕದಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಪೋಟಕ ತಯಾರಿಸುತ್ತಿದ್ದರು. ಈ ಪೈಕಿ ತ್ರಿಶೂರಿನ ವರ್ಗೀಸ್, ಹಾಸನ ನಾಯಕನಹಳ್ಳಿ ಚೇತನ್, ಕೇರಳದ ಸ್ವಾಮಿ ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಸ್ಪೋಟದಲ್ಲಿ ಗಾಯಗೊಂಡಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸದ್ಯ ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.