ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಪಕ್ಷಕ್ಕೆ ಕರೆತರುವಲ್ಲಿ ಬಿಜೆಪಿ ಯಶಸ್ವಿಯಾಗಿದ್ದು, ಈ ಬೆನ್ನಲ್ಲೇ ಹಲವರಿಗೆ ಬಿಜೆಪಿ ಗಾಳ ಹಾಕುತ್ತಿದೆ ಎನ್ನಲಾಗಿದೆ.
ಇದರ ನಡುವೆ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಬಿಜೆಪಿಗೆ ಬೆಂಬಲ ಘೋಷಿಸಿದ್ದು, ಮತ್ತೆ ರೆಡ್ಡಿ ಬಿಜೆಪಿಗೆ ಬರ್ತಾರಾ ಎಂಬ ಸಂಶಯ ಮೂಡಿದೆ. ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ದರಿದ್ದೇವೆ ಎಂದು ಇತ್ತೀಚಿಗೆ ಹೇಳಿದ್ದ ಜನಾರ್ದಾನ ರೆಡ್ಡಿ, ಇದೀಗ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿಯವರಿಗೆ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದ ರೆಡ್ಡಿ ಆದರೆ ಬಿಜೆಪಿ ಪಕ್ಷಕ್ಕೆ ಸೇರುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದರು. ಈ ಮೂಲಕ ರೆಡ್ಡಿ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ.
ಜನಾರ್ದನ ರೆಡ್ಡಿಯನ್ನ ವಾಪಸ್ ಬಿಜೆಪಿಗೆ ಕರೆತರಲು ತೆರೆಮರೆ ಪ್ರಯತ್ನಗಳು ನಡೆದಿದ್ದು, ಗೆಳೆಯ ಶ್ರೀರಾಮುಲು ಮೂಲಕ ರೆಡ್ಡಿ ವಾಪಸ್ ಬಿಜೆಪಿಗೆ ಮರಳಲಿದ್ದಾರೆ ಎಂಬ ಗುಸುಗುಸು ಕೇಳಿಬರುತ್ತಿದೆ.