ತನ್ನ ಟೈಟಲ್ ಮೂಲಕವೇ ಸಿನಿ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಂಯುಕ್ತ ಹೆಗಡೆ ನಟನೆಯ ‘ಕ್ರೀಂ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದೆ. ಕ್ರೀಮ್ ಚಿತ್ರತಂಡ ಇಂದು ಟೈಲರ್ ಬಿಡುಗಡೆ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ. ಇಂದು ಸಂಜೆ 6:30ಕ್ಕೆ A2 ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಟ್ರೈಲರ್ ವೀಕ್ಷಿಸಬಹುದಾಗಿದೆ.
ಅಭಿಷೇಕ್ ಬಸಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು ಸಂಯುರ್ದಿನಿ ಬ್ಯಾನರ್ ನಲ್ಲಿ ಡಿಕೆ ದೇವೇಂದ್ರ ನಿರ್ಮಾಣ ಮಾಡಿದ್ದಾರೆ. ಆರ್ಯನ್ ಗೌಡ ಸಂಕಲನ ಹಾಗೂ ಸುನೋಜ್ ವೇಲಾಯುಧನ್ ಛಾಯಾಗ್ರಹಣವಿದೆ. ನೈಜ್ಯ ಘಟನಾಧಾರಿತ ಈ ಸಿನಿಮಾದಲ್ಲಿ ಸಂಯುಕ್ತ ಹೆಗಡೆ ವೇಶ್ಯೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ರೋಷನ್, ಅರುಣ್ ಸಾಗರ್, ಉಳಿದ ಪಾತ್ರ ವರ್ಗದಲ್ಲಿದ್ದಾರೆ.