ಮಂಡ್ಯ : ಮಂಡ್ಯದಲ್ಲಿ ಹನುಮಾನ್ ಧ್ವಜ ದಂಗಲ್ ಭುಗಿಲೆದ್ದಿದ್ದು, ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.
ಪೊಲೀಸರು ಲಾಠಿ ಬೀಸಿದ ಪರಿಣಾಮ ಇಬ್ಬರು ಬಿಜೆಪಿ ಕಾರ್ಯಕರ್ತರ ತಲೆಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಮಂಡ್ಯದಲ್ಲಿ ಹನುಮಾನ್ ಧ್ವಜ ಪ್ರತಿಭಟನೆ ಹಿನ್ನೆಲೆ ನಿನ್ನೆ ಜನರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇಂದು ಮತ್ತೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಮಂಡ್ಯದ ಡಿಸಿ ಕಚೇರಿಯ ಬಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಿಜೆಪಿ ಸೋಮವಾರ ಕರೇಗೋಡು ಗ್ರಾಮದಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಸಿತು. ಹನುಮಾನ್ ಧ್ವಜವನ್ನು ತೆಗೆದುಹಾಕಿದ್ದಕ್ಕಾಗಿ ಪ್ರತಿಭಟನೆಯ ಸಂಕೇತವಾಗಿ ಪ್ರತಿಭಟನಾಕಾರರು ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ.
.