HomeKarnataka'ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ'-ಸಿಎಂ ಸಿದ್ದರಾಮಯ್ಯ

‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ’-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ “INAUGURATION OF 5th EDITION OF GAFX SUMMIT” ಕಾರ್ಯಕ್ರಮದಲ್ಲಿ ಭಾಗವಹಿಸಿನಂತರ ಮಾತನಾಡಿದ ಅವರು ‘ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ ಮನುಷ್ಯರನ್ನು ಪ್ರೀತಿಸುವ, ಎಲ್ಲ ಧರ್ಮಗಳನ್ನು ಗೌರವಿಸುವ ಹಿಂದೂ ನಾನು. ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯವರು ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ. ನಮಗೆ ಅದರಲ್ಲಿ ನಂಬಿಕೆ ಇದೆ ಎಂದರು.

ಭಗವಾಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ರಾಷ್ಟ್ರ ಧ್ವಜವನ್ನು ಹಾರಿಸಲು ಅವರು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು. ಬಿಜೆಪಿಯವರು ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದ್ದಾರೆ ಎಂದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ತೆರವುಗೊಳಿಸಿದ್ದು ವಿವಾದಕ್ಕೆ ಕಾರಣವಾಗಿದೆ .

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular