HomeKarnatakaರಾಜ್ಯ ಶಿಕ್ಷಕರ ವರ್ಗಾವಣೆ ʻಕೌನ್ಸೆಲಿಂಗ್ʼ ಮುಂದೂಡಿಕೆ : ಇಲ್ಲಿದೆ ಮಾಹಿತಿ

ರಾಜ್ಯ ಶಿಕ್ಷಕರ ವರ್ಗಾವಣೆ ʻಕೌನ್ಸೆಲಿಂಗ್ʼ ಮುಂದೂಡಿಕೆ : ಇಲ್ಲಿದೆ ಮಾಹಿತಿ

ಬೆಂಗಳೂರು : 2023-24ನೇ ಸಾಲಿನಲ್ಲಿ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿಗೆ ಪೂರಕವಾಗಿ ಅರ್ಹ ಹಿರಿಯ/ಮುಖ್ಯ ಶಿಕ್ಷಕರಿಗೆ ವಲಯ ವರ್ಗಾವಣೆಯನ್ನು ಆನ್‌ಲೈನ್ ಕೌನ್ಸಿಲಿಂಗ್‌ ಮೂಲಕ ಮಾಡುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ(HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-1ರಲ್ಲಿ ಬಡ್ತಿ ಕುರಿತಂತೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ಶಿಕ್ಷಕರ ವರ್ಗಾವಣಾ ನಿಯಂತ್ರಣ ಕಾಯ್ದೆ-2020ರ ಸೆಕ್ಷನ್-3 ಪ್ರಕಾರ ‘ಸಿ’ ವಲಯದಲ್ಲಿನ ಶಾಲೆಗಳಲ್ಲಿ ಸ್ಥಳಾವಕಾಶ ಕಲ್ಪಿಸುವ ದೃಷ್ಟಿಯಿಂದ ‘ಸಿ’ ವಲಯದ ಮುಖ್ಯ ಶಿಕ್ಷಕರ/ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗಳನ್ನು ಸಂಬಂಧಿಸಿದ ಶಾಲೆಗಳಲ್ಲಿ ತೆರವುಗೊಳಿಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ದಿನಾಂಕ: 30/01/2024 ರಂದು ಆಯಾ ಜಿಲ್ಲಾ ಹಂತದಲ್ಲಿ ವಲಯ ವರ್ಗಾವಣಾ ಕೌನ್ಸಿಲಿಂಗ್‌ನ್ನು ನಿಗಧಿಪಡಿಸಲಾಗಿತ್ತು. ಆದರೆ ವಲಯ ವರ್ಗವಣಾ ಕೌನ್ಸಿಲಿಂಗ್‌ನ್ನು ಆನ್‌ಲೈನ್ ಮೂಲಕ ನಿರ್ವಹಿಸಲು ಉಪನಿರ್ದೇಶಕರು(ಆಡಳಿತ) ಇವರುಗಳಕೋರಿಕೆಯ ಮೇರೆಗೆ ನಿರ್ಧರಿಸಲಾಗಿರುವುದರಿಂದ ದಿನಾಂಕ: 30/01/2024 ರಂದು ನಡೆಯಬೇಕಾಗಿದ್ದ ವಲಯ ವರ್ಗಾವಣಾ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ಆಡಳಿತಾತ್ಮಕ ದೃಷ್ಟಿಯಿಂದ ದಿನಾಂಕ: 03/02/2024 ರಂದು ಆನ್‌ಲೈನ್ ಕೌನ್ಸಿಲಿಂಗ್ ಮೂಲಕ ಆಯಾ ವ್ಯಾಪ್ತಿಯ ಉಪನಿರ್ದೇಶಕರು(ಆಡಳಿತ) ಇವರ ಕಛೇರಿಯಲ್ಲಿ ನಡೆಸಲಾಗುವುದು. ಸಕ್ಷಮ ಪ್ರಾಧಿಕಾರಿಗಳು ಬದಲಾವಣೆಯನ್ನು ಗಮನಿಸಿ ಆನ್‌ಲೈನ್‌ ಕೌನ್ಸಿಲಿಂಗ್ ಪ್ರಕ್ರಿಯೆಗೆ ಎಲ್ಲಾ ಅಗತ್ಯ ಪೂರ್ವಭಾವಿ ಸಿದ್ದತೆಗಳನ್ನು ಮಾಡಿಕೊಳ್ಳಲು ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular