![](https://kannadadunia.com/wp-content/uploads/2018/11/breaking-news_1521898157229.jpg_81950761_ver1.0_640_480.jpg)
ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಕಿಡಿಗೇಡಿಗಳು ಮತ್ತೆ ಅಟ್ಟಹಾಸ ಮೆರೆದಿದ್ದು, ನೈಸ್ ರಸ್ತೆಯಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿ ನಿನ್ನೆ ರಾತ್ರಿ 10ಗಂಟೆ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ.
ರಾತ್ರಿ ಕಿಡಿಗೇಡಿಗಳು ನೈಸ್ ರಸ್ತೆಯಲ್ಲಿ ಸುಂಕದಕಟ್ಟೆ, ಕೆಂಗೇರಿ ಮಾರ್ಗದಲ್ಲಿ ಚಲಿಸುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಮೂರ್ನಾಲ್ಕು ಕಾರು, ಲಾರಿಗೆ ಹಾನಿಯಾಗಿದೆ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.