![](https://kannadadunia.com/wp-content/uploads/2021/05/Vidhana_Soudha_750_1-1.gif)
ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯದಲ್ಲಿ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಸಿದ್ದತೆ ನಡೆಸಿದ್ದು, ಜಿಲ್ಲಾವಾರು ಹುದ್ದೆಗಳ ಮಾಹಿತಿಯನ್ನು ಹಂಚಿಕೊಂಡಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕಂದಾಯ ಇಲಾಖೆಯ ವ್ಯಾಪ್ತಿಯಲ್ಲಿ ಖಾಲಿಯಿರುವ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇರ ನೇಮಕಾತಿ ಮಾಡುವ ಸಂಬಂಧ ಆರ್ಥಿಕ ಇಲಾಖೆಯು 2023-24, 2024-25 ಹಾಗೂ 2025-26 ನೇ ಸಾಲಿನ ವಾರ್ಷಿಕವಾಗಿ 500 ಹುದ್ದೆಗಳನ್ನು ಭರ್ತಿ ಮಾಡಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ.
ಎಲ್ಲ ಜಿಲ್ಲೆಗಳಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಪ್ರಸಕ್ತ ಖಾಲಿಯಿರುವ 1820 ಹುದ್ದೆಗಳ ಪೈಕಿ 1000 ಹುದ್ದೆಗಳನ್ನು ನೇರನೇಮಕಾತಿಯಡಿ ಭರ್ತಿಮಾಡಿಕೊಳ್ಳಲು ಉದ್ದೇಶಿಸಲಾಗಿರುತ್ತದೆ.
ಕಂದಾಯ ಇಲಾಖೆಯಲ್ಲಿ ಮಂಜೂರಾದ ಹುದ್ದೆಗಳು, ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಗಳು ಹಾಗೂ ಖಾಲಿ ಹುದ್ದೆಯ ಸಂಖ್ಯೆಗಳ (ನೇರ ನೇಮಕಾತಿ ಹಾಗೂ ಮುಂಬಡ್ತಿ ಹುದ್ದೆಗಳನ್ನು ಒಳಗೊಂಡಂತೆ) ಆಯಾ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಇದರೊಂದಿಗೆ ಲಗತ್ತಿಸಲಾದ ಅನುಬಂಧ-1ರ ಕಲಂ (06) ರಲ್ಲಿ ನೀಡಿರುವಂತೆ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುತ್ತಿದೆ.
![](https://kannadadunia.com/wp-content/uploads/2024/01/WhatsApp-Image-2024-01-30-at-7.08.46-AM-1.jpeg)
![](https://kannadadunia.com/wp-content/uploads/2024/01/WhatsApp-Image-2024-01-30-at-7.08.46-AM.jpeg)