ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬಾಂಬ್ ಇದೆ ಎಂದು ಸುಳ್ಳು ಹೇಳಿ ಹುಚ್ಚಾಟ ಮೆರೆದ ಭೂಪನೊಬ್ಬ ಸುಖಾಸುಮ್ಮನೆ ಸಂಕಷ್ಟಕ್ಕೆ ಗುರಿಯಾಗಿದ್ದಾನೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನ ಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಆರೋಪಿ ಸಜ್ಜು ಕುಮಾರನ್ನು ಇದೀಗ ವಶಕ್ಕೆ ಪಡೆಯಲಾಗಿದೆ.
ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸಜ್ಜುಕುಮಾರ್ ತನ್ನ ಊರಾದ ಕೇರಳಕ್ಕೆ ಹೋಗುತ್ತಿದ್ದನು. ವಿಮಾನ ನಿಲ್ದಾಣ ಪ್ರವೇಶಿಸುವಾಗ ಏನಿದೆ ಬ್ಯಾಗ್ನಲ್ಲಿ ಎಂದು ತಪಾಸಣೆ ಮಾಡುವ ಅಧಿಕಾರಿಗಳು ಕೇಳಿದ್ದರು. ಆಗ ಇವನು ತಮಾಷೆಗೆ ʻಬಾಂಬ್ ಇದೆʼ ಎಂದಿದ್ದನು. ಕೂಡಲೇ ಅಲರ್ಟ್ ಆದ ಅಧಿಕಾರಿಗಳು ಆತನನ್ನು ಕರೆದುಕೊಂಡು ಹೋಗಿ ಬ್ಯಾಗ್ ಚೆಕ್ ಮಾಡಿದ್ದಾರೆ. ಆದರೆ ಏನೂ ಕಂಡು ಬಂದಿಲ್ಲ. ಅಧಿಕಾರಿಗಳ ಜತೆ ಉದ್ಧಟತನದಿಂದ ವರ್ತಿಸಿದ ಸಜ್ಜುಕುಮಾರ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.