ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, ಅದರಲ್ಲಿ ದಿನಾಂಕ: 01.04.2006 ರಂದು ಹಾಗೂ ತದನಂತರ ಸರ್ಕಾರಿ ಸೇವೆಗೆ ಸೇರಿದ ಎಲ್ಲಾ ಸರ್ಕಾರಿ ನೌಕರರಿಗೆ ನೂತನ ಅಂಶದಾಯಿ ಕೊಡುಗೆ ಯೋಜನೆಯನ್ನು (ರಾಷ್ಟ್ರೀಯ ಪಿಂಚಣಿ ಯೋಜನ ಕಡ್ಡಾಯವಾಗಿ ಜಾರಿಗೊಳಿಸಲಾಗಿದೆ.
ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯವಾಗಿ ಸಲ್ಲಿಸಬೇಕು.
ಅಗತ್ಯ ದಾಖಲೆಗಳ ಮಾಹಿತಿ
01 ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ
02 ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕದ ಪ್ರತಿ
03 ನೇಮಕಾತಿ ಆದೇಶ ದಿನಾಂಕ ಪ್ರತಿ
04 ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡುವುದು
05 ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿ/ಇಲಾಖೆಯ ವಿಳಾಸ
06 ಕೆಜಿಐಡಿ ಸಂಖ್ಯೆ:
07 NPS ಪ್ರಾನ್ ಸಂಖ್ಯೆ:
08 ಪ್ರಸ್ತುತ ವೇತನ ಚೀಟಿ: