HomeKarnatakaBIG NEWS: ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್

BIG NEWS: ಕಳ್ಳತನ ಮಾಡಲು ಹೋಗಿ ಸಿಕ್ಕಿ ಬಿದ್ದ ಅಸಿಸ್ಟೆಂಟ್ ಲೋಕೋ ಪೈಲಟ್

ಬೆಂಗಳೂರು: ಸಾಲ ತೀರಿಸಲು ಅಸಿಸ್ಟೆಂಟ್ ಲೋಕೋ ಪೈಲಟ್ ಓರ್ವರು ಕಳ್ಳತನದ ಹಾದಿ ಹಿಡಿದು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ.

ಪಡಿ ಸ್ವರಾಜ್ ಬಂಧಿತ ಅಸಿಸ್ಟೆಂಟ್ ಲೋಕೋ ಪೈಲಟ್. ಬಂಧಿತನಿಂದ 3 ಲಕ್ಷದ 33 ಸಾವಿರದ 489 ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಒಂದು ವರ್ಷದ ಹಿಂದಷ್ಟೇ ವಿವಾಹವಾಗಿದ್ದ ಪಡಿ ಸ್ವರಾಜ್, ಸುಮಾರು 13 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ. ಸಾಲ ತೀರಿಸಲಾಗದೇ ಪರದಾಡುತ್ತಿದ್ದ. ಈ ವೇಳೆ ಬೆಂಗಳೂರಿನಿಂದ ಉಡುಪಿಗೆ ಪ್ರಯಾಣಿಸುತ್ತಿದ್ದ ಓರ್ವ ಪ್ರಯಾಣಿಕ ಮಲಗಿದ್ದಾಗ ಅವರ ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ. ಲ್ಯಾಪ್ ಟಾಪ್ ಕಳ್ಳತನವಾದ ಬಗ್ಗೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರಿಗೆ ಪಡಿ ಸ್ವರಾಜ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅನುಮಾನಗೊಂಡ ಪಡಿ ಸ್ವರಾಜ್ ಟ್ರಾಲಿ ಬ್ಯಾಗ್ ಪರಿಶೀಲಿಸಿದ ಪೊಲೀಸರಿಗೆ ಮೊಬೈಲ್ ಗಳು, ಲ್ಯಾಪ್ ಟಾಪ್, ಚಿನ್ನದ ಆಭರಣಗಳು ಪತ್ತೆಯಾಗಿವೆ. ಆತನನ್ನು ವಶಕ್ಕೆ ಪಡೆದ ಅರಸಿಕೆರೆ ಪೊಲೀಸರು ವಿಚಾರಣೆ ನಡೆಸಿದಾಗ ಕಳ್ಳತನ ಮಾಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular