HomeKarnatakaBIG NEWS: 3 ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ; ಆರೋಪಿ ಅರೆಸ್ಟ್

BIG NEWS: 3 ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ಪತ್ತೆ; ಆರೋಪಿ ಅರೆಸ್ಟ್

ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬರೋಬ್ಬರಿ ಮೂರು ಕೋಟಿ ಮೌಲ್ಯದ ನಿಷೇಧಿತ ಇ-ಸಿಗರೇಟ್ ನ್ನು ವಶಕ್ಕೆ ಪಡೆದಿದ್ದಾರೆ.

ದುಬೈನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಇ-ಸಿಗರೇಟ್ ನ್ನು ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಒಂದು ಸಿಗರೇಟ್ ನ್ನು 5-6 ಸಾವಿರ ರೂಪಾಯಿಗೆ ಮಾರಾಟ ಮಾಡಲಾಗುತ್ತಿತ್ತು.

ಬ್ಲೂ ಡಾರ್ಟ್ ಕೊರಿಯರ್ ಮೂಲಕ ದುಐನಿಂದ ದೆಹಲಿಗೆ ಬಂದಿತ್ತು. ಅದನ್ನು ಬೆಂಗಳೂರಿಗೆ ತಂದು ಸುದ್ದಗುಂಟೆ ಪಾಳ್ಯದ ಮನೆಯೊಂದರಲ್ಲಿ ಇರಿಸಲಾಗಿತ್ತು. ಮನೆ ಮೇಲೆ ದಾಳಿ ನಡೆಸಿದ ಪೊಲಿಸ್ ಅಧಿಕರಿಗಳು 3 ಕೋಟಿ ಮೌಲ್ಯದ ಇ-ಸಿಗರೇಟ್ ವಶಕ್ಕೆ ಪಡೆದಿದ್ದಾರೆ. ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಂಧಿತ ಆರೋಪಿಯನ್ನು ಕೇರಳ ಮೂಲದ ಶೋಹೇಬ್ ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಹಲವು ಸ್ಮೋಕಿ ಜೋಜ್ ಹಾಗೂ ರೀಟೆಲ್ ಗಳಿಗೆ ಮಾರಾಟ ಮಾಡುತ್ತಿದ್ದ. ಆನ್ ಲೈನ್ ಮೂಲಕ ಆರ್ಡರ್ ಪಡೆದು ಪೋರ್ಟರ್ ಹಾಗೂ ಡ್ನಜೋ ಮೂಲಕ ಪೂರೈಸುತ್ತಿದ್ದ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular