ಇಸ್ಲಾಮಾಬಾದ್: ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ವರದಿಯಾಗಿದೆ.
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಅವರ ಪಕ್ಷದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮಾಜಿ ವಿದೇಶಾಂಗ ಸಚಿವ ಮತ್ತು ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ನಾಯಕ ಶಾ ಮಹಮೂದ್ ಖುರೇಷಿ ಅವರಿಗೂ ಇದೇ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.