ಬೆಂಗಳೂರು : ಬೆಂಗಳೂರಿನ ಶಿವಾಜಿನಗರದಲ್ಲಿ ಹಾರಿಸಿದ್ದ ಹಸಿರು ಬಾವುಟವನ್ನು ತೆರವು ಮಾಡಲಾಗಿದೆ,ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಸಿರು ಬಾವುಟವನ್ನು ತೆರವುಗೊಳಿಸಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ.
ಶಿವಾಜಿನಗರದ ಚಾಂದಿನಿ ಚೌಕ್ ನಲ್ಲಿ ಹಾಕಲಾಗಿದ್ದ ಹಸಿರು ಬಾವುಟವನ್ನು ತೆರವು ಮಾಡಲಾಗಿದೆ. ಹಸಿರು ಬಾವುಟ ಹಾರಿಸಿದ್ದ ಬಗ್ಗೆ ಹಿಂದೂ ಕಾರ್ಯಕರ್ತರೊಬ್ಬರು ಟ್ವೀಟ್ ಮಾಡಿದ್ದರು. ಹಸಿರು ಬಾವುಟ ತೆಗೆಸಲು ನಿಮಗೆ ತಾಕತ್ ಇಲ್ಲವಾ ಎಂದು ಟ್ವೀಟ್ ಮಾಡಿದ್ದರು. ಈ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಧ್ವಜಸ್ತಂಭದಲ್ಲಿದ್ದ ಹಸಿರು ಬಾವುಟ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್
ಮಾನ್ಯ @CPBlr@DCPEASTBCP ಅವರೇ, ಈ ರೀತಿ ಶತ್ರು ದೇಶದ ಬಣ್ಣವನ್ನು ಹೋಲುವ ಹಸಿರು ಧ್ವಜವನ್ನು ಸಾರ್ವಜನಿಕ ಪ್ರದೇಶದಲ್ಲಿ ಹಾರಿಸುವುದು ನಮ್ಮ flag code ಗೆ ವಿರುದ್ದವಾದದ್ದಲ್ಲವೇ ? ಈ ಕೂಡಲೇ, ಇದನ್ನು ತೆಗೆದು ಇಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ. ಶಿವಾಜಿನಗರ ಇರುವುದು ಭಾರತದಲ್ಲಿ, ಪಾಕಿಸ್ತಾನದಲ್ಲಲ್ಲ ಎಂದು ಟ್ವೀಟ್ ಮಾಡಿದ್ದಾರೆ.