ಚಾಮರಾಜನಗರ : ಉಳುಮೆ ಮಾಡುವಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ರೈತ ಸಾವನ್ನಪ್ಪಿದ ಘಟನೆ ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಾದಪ್ಪ (58) ಎಂದು ಗುರುತಿಸಲಾಗಿದೆ. ತಮ್ಮ ಜಮೀನಿನಲ್ಲಿ ಅವರು ಉಳುಮೆ ಮಾಡುತ್ತಿದ್ದಾಗ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ಅಡಿ ಸಿಲುಕಿದ ಮಾದಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.