ಬೆಂಗಳೂರು : ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರದ ಮಹತ್ವದ ಸೂಚನೆ ನೀಡಿದೆ.
ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸಲು ಆದ್ಯತೆ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಬೆಂಗಳೂರಿನ ಪಿಜಿಗಳಲ್ಲಿ ಕೆಲವು ಕಡ್ಡಾಯ ನಿಯಮಗಳನ್ನು ಜಾರಿಗೆ ತರಲು ತೀರ್ಮಾನಿಸಲಾಗಿದೆ.
ನಾಗರಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಬಲಪಡಿಸುವುದು ನಮ್ಮ ಆದ್ಯತೆಯಾಗಿದೆ. ಬೆಂಗಳೂರಿನ ಪಿಜಿಗಳಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಕೆ ಕಡ್ಡಾಯವಾಗಿದೆ ಹಾಗೂ ಪಿಜಿಗಳಲ್ಲಿ ವಾಸಿಸುವವರ ಅಧಿಕೃತ ದಾಖಲೆ ಸಂಗ್ರಹ ಮಾಡುವುದು ಕಡ್ಡಾಯವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ .