![](https://kannadadunia.com/wp-content/uploads/2024/01/Kandaya-adalat.jpg)
ಬೆಂಗಳೂರು : ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ನಡೆಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪಹಣಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಲು ರಾಜ್ಯಾದ್ಯಂತ ಮತ್ತೊಮ್ಮೆ ಕಂದಾಯ ಅದಾಲತ್ ಆಂದೋಲನ ಕೈಗೊಳ್ಳಬೇಕು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಪಹಣಿ ತಿದ್ದುಪಡಿ ಅಧಿಕಾರವನ್ನು ಸಹಾಯಕ ಆಯುಕ್ತರಿಂದ ತಹಶೀಲ್ದಾರರಿಗೆ ಪ್ರತ್ಯಾಯೋಜಿಸಿ ಮುಂದುವರೆಸಿಕೊಂಡು ಬರಲಾಗುತ್ತಿದೆ.
ಅದರಂತೆ ಅಧಿಕಾರ ಪ್ರತ್ಯಾಯೋಜನೆಯ ಅವಧಿ ಕಳೆದ ಡಿಸೆಂಬರ್ 31ಕ್ಕೆ ಮುಕ್ತಾಯಗೊಂಡಿದೆ. ಅದಾಲತ್ ಮೂಲಕ ಪಹಣಿ ತಿದ್ದುಪಡಿ ಅಧಿಕಾರವನ್ನು ಅವಧಿ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದ್ದು, ಸದ್ಯದಲ್ಲೇ ಅದಾಲತ್‌ನ ದಿನಾಂಕ ಘೋಷಿಸಲಾಗುವುದು ತಿಳಿಸಿದ್ದಾರೆ.