![](https://kannadadunia.com/wp-content/uploads/2024/01/JEE-Main-Joint-entrance-exam-btech-barch-nta.png)
ಬೆಂಗಳೂರು : ಉನ್ನತ ಶಿಕ್ಷಣ ಇಲಾಖೆಯು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಇನ್ಮುಂದೆ ಪಿಎಚ್ ಡಿಗೂ ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ವೃತ್ತಿಪರ ಕೋರ್ಸ್ ಗಳು ಹಾಗೂ ವಿವಿಧ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸುವ ಮಾದರಿಯಲ್ಲೇ, ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಪಿಎಚ್ ಡಿ ಗೂ ಸಿಇಟಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಉನ್ನತ ಶಿಕ್ಷಣ ಇಲಾಖೆಯು ಪಿಎಚ್ ಡಿ ಅಧ್ಯಯನಕ್ಕೆ ಅರ್ಹ ಅಭ್ಯರ್ಥಿಗಳ ಆಯ್ಕೆಗೆ ಸಿಇಟಿ ನಡೆಸಿ ಆನ್ ಲೈನ್ ಕೌನ್ಸೆಲಿಂಗ್ ಮೂಲಕ ಎಲ್ಲ ವಿವಿಗಳಿಗೂ ಸೀಟು ಹಂಚಿಕೆ ಮಾಡಲು ಯೋಜನೆ ರೂಪಿಸಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಈ ಕ್ರಮ ಜಾರಿಗೆ ಚಿಂತನೆ ನಡೆಸಿದೆ.