![](https://kannadadunia.com/wp-content/uploads/2023/01/Rape.jpg)
ಕೊರಟಗೆರೆ : ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮಧುಗಿರಿ ತಾಲೂಕಿನ ಐಡಿ ಹಳ್ಳಿಯ ಪವನ್ ಎಂಬ ಯುಕನ ಅತ್ಯಾಚಾರ ಎಸಗಿರುವ ಆರೋಪಿ.
ಮನೆ ಬಳಿ ಕುಂಟೆಬೆಲ್ಲೆ ಆಡುತ್ತಿದ್ದ ಇಬ್ಬರು ಬಾಲಕಿಯರ ಪೈಕಿ ಓರ್ವ ಬಾಲಕಿಯನ್ನು ಮನೆಯೊಳಗೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ವೇಳೆ ಆಕೆಯ ಜೊತೆಗಿದ್ದ ಬಾಲಕಿ ಅಕ್ಕಪಕ್ಕದವರಿಗೆ ವಿಷಯ ತಿಳಿಸಿದ್ದು, ಕೂಡಲೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.