HomeKarnatakaಎಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ 'ಯಶಸ್ವಿನಿ' ಯೋಜನೆಯಡಿ ಚಿಕಿತ್ಸೆ: ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿ

ಎಲ್ಲೆಡೆ ಖಾಸಗಿ ಆಸ್ಪತ್ರೆಗಳಲ್ಲಿ ‘ಯಶಸ್ವಿನಿ’ ಯೋಜನೆಯಡಿ ಚಿಕಿತ್ಸೆ: ವಾರದೊಳಗೆ ಬಿಲ್ ಪಾವತಿ ವ್ಯವಸ್ಥೆ ಜಾರಿ

ಬೆಂಗಳೂರು: ಯಶಸ್ವಿನಿ ಯೋಜನೆಯಡಿ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡಿದ ಬಿಲ್ ದಾರದೊಳಗೆ ಪಾವತಿ ಮಾಡುವ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ಈ ಹಿಂದೆ ಸುಮಾರು 25 ಕೋಟಿ ರೂಪಾಯಿಯಷ್ಟು ಖಾಸಗಿ ಆಸ್ಪತ್ರೆಗಳ ಬಿಲ್ ಬಾಕಿ ಉಳಿದಿದ್ದು, ಇದರಿಂದಾಗಿ ಯಶಸ್ವಿನಿ ಯೋಜನೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದೇಟು ಹಾಕುತ್ತಿದ್ದವು. ಈ ಸಮಸ್ಯೆ ನಿವಾರಿಸಲಾಗಿದ್ದು, ರೋಗಿಗಳಿಗೆ ಯಾವುದೇ ತೊಂದರೆಯಾಗದು ಎಂದು ಹೇಳಿದ್ದಾರೆ.

ಯಶಸ್ವಿನಿ ಯೋಜನೆ ಚಿಕಿತ್ಸೆ ದರವನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ದರಕ್ಕೆ ಸಮನಾಗಿ ಪರಿಷ್ಕರಿಸಲು ತೀರ್ಮಾನಿಸಿದ್ದು, ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ನೀಡಿವೆ. ರಾಜ್ಯದ ಎಲ್ಲೆಡೆ ಖಾಸಗಿ ಆಸ್ಪತ್ರೆಗಳು ಯಶಸ್ವಿನಿ ಯೋಜನೆಯಡಿ ಚಿಕಿತ್ಸೆ ನೀಡಲು ಮುಂದೆ ಬಂದಿವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular