ಬೆಂಗಳೂರು : ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಳ್ಳುಳ್ಳಿ ದರ ಭಾರಿ ಏರಿಕೆ ಕಂಡಿದೆ. ಕಳೆದ ಬಾರಿ ಈರುಳ್ಳಿ , ಟೊಮ್ಯಾಟೋ ಬೆಲೆ ಏರಿಕೆ ಕಂಡಿತ್ತು, ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೇರಿದೆ.
ಕಳೆದ ಕೆಲವು ದಿನಗಳಿಂದ ಬೆಳ್ಳುಳ್ಳಿ ದರ ಭಾರಿ ಏರಿಕೆ ಕಂಡಿದ್ದು, ಜನ 400-500ರೂಗೆ ಕೆಜಿ ಬೆಳ್ಳುಳ್ಳಿ ಖರೀದಿ ಮಾಡುತ್ತಿದ್ದಾರೆ. ಉತ್ತಮ ಗುಣಮಟ್ಟದ ನಾಟಿ ಬೆಳ್ಳುಳ್ಳಿ ದರ 450 ರೂ.ದಿಂದ 500 ರೂ.ವರೆಗೂ ಮಾರಾಟವಾಗುತ್ತಿದೆ.
ಹೆಚ್ಚಿನ ಪ್ರಮಾಣದಲ್ಲಿ ಬೆಳ್ಳುಳ್ಳಿ ಇರದೇ ಇರುವುದು ಬೆಲೆ ಹೆಚ್ಚಳಕ್ಕೆ ಕಾರಣವಾಗಿದ್ದು, ಬೆಳ್ಳುಳ್ಳಿ ಬೆಳೆದ ರೈತರು ಫುಲ್ ಖುಷಿ ಆಗಿದ್ದಾರೆ. ಫೆಬ್ರವರಿ ನಂತರ ಬೆಳ್ಳುಳ್ಳಿ ದರ ಇಳಿಕೆಯಾಗುವ ಸಾಧ್ಯತೆಯಿದೆ.