HomeLatest Newsವಿಮಾನದಲ್ಲಿ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರು : ಪೊಲೀಸ್‌ ದೂರು ದಾಖಲಿಸಿದ ಮ್ಯಾನೇಜರ್

ವಿಮಾನದಲ್ಲಿ ಮಯಾಂಕ್ ಅಗರ್ವಾಲ್ ಆರೋಗ್ಯದಲ್ಲಿ ಏರುಪೇರು : ಪೊಲೀಸ್‌ ದೂರು ದಾಖಲಿಸಿದ ಮ್ಯಾನೇಜರ್

‌ಅಗರ್ತಲಾ : ಇಂಡಿಗೋ ಏರ್ಲೈನ್ಸ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಕರ್ನಾಟಕ ರಣಜಿ ತಂಡದ ನಾಯಕ ಮಯಾಂಕ್ ಅಗರ್ವಾಲ್ ಅವರು ವಿಷಕಾರಿ ದ್ರವ ಸೇವಿಸಿದ ಕಾರಣ ತ್ರಿಪುರಾದ ರಾಜಧಾನಿ ಅಗರ್ತಲಾದ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಪೊಲೀಸ್ ಠಾಣೆಯಲ್ಲಿ ಅಧಿಕೃತ ದೂರು ದಾಖಲಿಸಿದ್ದಾರೆ.

32 ವರ್ಷದ ಕ್ರಿಕೆಟಿಗ ಅಗರ್ವಾಲ್‌  ಆರೋಗ್ಯ ಸ್ಥಿರವಾಗಿದೆ. ಮತ್ತು ಅವರ ಮ್ಯಾನೇಜರ್ ಈ ಬಗ್ಗೆ ತನಿಖೆ ನಡೆಸಲು ಅಧಿಕೃತ ಪೊಲೀಸ್ ದೂರು ದಾಖಲಿಸಿದ್ದಾರೆ.

ಇಂಡಿಗೋ ವಿಮಾನದಲ್ಲಿದ್ದ ದ್ರವ ಪದಾರ್ಥವನ್ನು ಸೇವಿಸುತ್ತಿದ್ದಂತೆ ಮಯಾಂಕ್ ಅವರಿಗೆ ಹೊಟ್ಟೆ ನೋವು ಶುರುವಾಗಿದ್ದು, ತುಟಿಗಳು ಊದಿಕೊಂಡಿದೆ. ಅವರು ವಾಂತಿ ಮಾಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಯಾಂಕ್ ಅಗರ್ವಾಲ್, ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ. ಈಗ ಅವರು ಸ್ಥಿರವಾಗಿದ್ದಾರೆ ಮತ್ತು ಅವರ ಜೀವಾಧಾರಗಳು ಸಾಮಾನ್ಯವಾಗಿದೆ. ಆದರೆ ಅವರ ಮ್ಯಾನೇಜರ್ ಎನ್ಸಿಸಿಪಿಎಸ್ (ನ್ಯೂ ಕ್ಯಾಪಿಟಲ್ ಕಾಂಪ್ಲೆಕ್ಸ್ ಪೊಲೀಸ್ ಠಾಣೆ) ಅಡಿಯಲ್ಲಿ ಈ ಬಗ್ಗೆ ತನಿಖೆ ನಡೆಸಲು ನಿರ್ದಿಷ್ಟ ದೂರು ದಾಖಲಿಸಿದ್ದಾರೆ ಎಂದು ಪಶ್ಚಿಮ ತ್ರಿಪುರಾದ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular