ಬೆಂಗಳೂರು : ಕರ್ನಾಟಕ ರಾಜ್ಯ ಪ್ರಗತಿ ಪಕ್ಷದ ಶಾಸಕ, ಗಣಿಧಣಿ ಜನಾರ್ದನ ರೆಡ್ಡಿ ಬಿಜೆಪಿಯತ್ತ ಒಲವು ತೋರಿಸಿದ್ದು, ಬಿಜೆಪಿ ಸೇರ್ಪಡೆಯಾಗುವುದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ ಎಂದು ಮೂಲಗಳು ತಿಳಿಸಿದೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಗಣಿಧಣಿ ಜನಾರ್ದನ ರೆಡ್ಡಿ ಪಕ್ಷ ವಿಲಿನಕ್ಕೆ ಜನಾರ್ಧನ ರೆಡ್ಡಿ ಆಸಕ್ತಿ ತೋರಿದ್ದಾರೆ ಎಂದು ಹೇಳಲಾಗಿದೆ. ಇಂದು ಸಂಜೆ ಈ ಬಗ್ಗೆ ಮಹತ್ವದ ಸಭೆ ನಡೆಯಲಿದ್ದು, ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ.
ಜನಾರ್ಧನ್ ರೆಡ್ಡಿ ಅವರು ಕೂಡ ತಮ್ಮ ಕರ್ನಾಟಕ ರಾಜ್ಯ ಪ್ರಗತಿ ಪಕ್ಷವನ್ನು ಬಿಜೆಪಿ ಜೊತೆಗೆ ವಿಲೀನಗೊಳಿಸಲು ಆಸಕ್ತಿ ತೋರಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ. ಇಂದು ಪಕ್ಷದ ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿರುವ ರೆಡ್ಡಿ ಬಳಿಕ ಈ ಬಗ್ಗೆ ಘೋಷಣೆ ಮಾಡುವ ಸಾಧ್ಯತೆಯಿದೆಎಂದು ತಿಳಿದುಬಂದಿದೆ.
ಸಭೆ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದು, ಶೆಟ್ಟರ್ ಬೆನ್ನಲ್ಲೇ ರೆಡ್ಡಿಗೆ ಗಾಳ ಹಾಕಿದೆ. ಜನಾರ್ಧನ್ ರೆಡ್ಡಿ ರಾಜಕೀಯ ನಡೆ ಬಹಳ ಕುತೂಹಲ ಮೂಡಿಸಿದೆ.