ಬೆಂಗಳೂರು : ಬೆಂಗಳೂರಲ್ಲಿ ಮತ್ತೊಂದು ಘೋರ ಘಟನೆ ನಡೆದಿದ್ದು, 6ನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ವಿಘ್ನೇಶ್ ಕೆ(19) ಎಂದು ಗುರುತಿಸಲಾಗಿದೆ.ಬೆಂಗಳೂರಿನ ಹೊಸರೋಡ್ ಬಳಿಯಿರುವ ಪಿಇಎಸ್ ಕಾಲೇಜಿನ 6 ನೇ ಮಹಡಿಯಿಂದ ಜಿಗಿದುಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ ಸಂಜೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದಿದ್ದಾನೆ, ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.