ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಫೆ.12ಕ್ಕೆ ವಿಚಾರಣೆ ಮುಂದೂಡಿದೆ.
ಸಿಬಿಐ ಹಾಗೂ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾ. ಕೆ ಸೋಮಶೇಖರ್, ನ್ಯಾ.ಉಮೇಶ್ ಹಾಗೂ ನ್ಯಾ.ಎಂ ಅಡಿಗರ ಪೀಠ ಫೆ.12ಕ್ಕೆ ವಿಚಾರಣೆ ಮುಂದೂಡಿದೆ.
ತನಿಖೆಯ ಹೊಣೆ ಲೋಕಾಯುಕ್ತ ಪೊಲೀಸರಿಗೆ ವರ್ಗಾಯಿಸಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರನ್ನು ಪ್ರತಿ ವಾದಿಯಾಗಿಸಲು ಮನವಿ ಸಲ್ಲಿಸಲಾಗಿದೆ. ಯತ್ನಾಳ್ ರಿಟ್ ಅರ್ಜಿಯ ಪ್ರತಿಯನ್ನು ಡಿಕೆಶಿ ವಕೀಲರಿಗೆ ಸಲ್ಲಿಸಲು ಸೂಚನೆ ನೀಡಲಾಗಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ . ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆ ಆದೇಶ ಹಿಂಪಡೆದ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಕೂಡ ನಡೆದಿದೆ.