BIG NEWS: ಮಂಗನ ಕಾಯಿಲೆ ಪ್ರಕರಣ ಹೆಚ್ಚಳ; ಉತ್ತರ ಕನ್ನಡದಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ಪತ್ತೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಉಲ್ಬಣಗೊಳ್ಳುತ್ತಿದ್ದು, ಒಂದೇ ತಾಲೂಕಿನಲ್ಲಿ ಒಂದೇ ದಿನ 8 ಜನರಲ್ಲಿ ಸೋಂಕು ದೃಢಪಟ್ಟಿದೆ.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನಲ್ಲಿ 8 ಜನರಲ್ಲಿ ಇದೀಗ ಮಂಗನ ಕಾಯಿಲೆ ಪತ್ತೆಯಾಗಿದೆ. ಸಿದ್ದಾಪುರ ತಾಲೂಕಿನ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಪತ್ತೆಯಾಗಿವೆ.

ಕೇವಲ 10 ದಿನಗಳಲ್ಲಿ 16 ಜನರಲ್ಲಿ ಮಂಗನ ಕಾಯಿಲೆ ಸೋಂಕು ಪತ್ತೆಯಾದಂತಾಗಿದೆ. ಮಂಗನ ಕಾಯಿಲೆಯಿಂದ ಬಳಲುತ್ತಿರುವ ಹತ್ತು ವರ್ಷದ ಮಗು ಶಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣ ಹಲವು ವರ್ಷಗಳಿಂದ ಪತ್ತೆಯಾಗಿರಲಿಲ್ಲ. ಇದೀಗ ಏಕಾಏಕಿ ಮಂಗನ ಕಾಯಿಲೆ ಹರಡುತ್ತಿದ್ದು, ಆರೋಗ್ಯ ಇಲಖೆಯ ಬಳಿ ಮುಂಜಾಗೃತಾ ಕ್ರಮವಾಗಿ ತೆಗೆದುಕೊಳ್ಳುವ ಲಸಿಕೆ ಇಲ್ಲ ಎಂದು ಹೇಳಲಾಗುತ್ತಿದೆ. ಹಲವು ದಿನಗಳಿಂದ ಮಂಗನ ಕಾಯಿಲೆ ಜಿಲ್ಲೆಯಲ್ಲಿ ಹೆಚ್ಚುತ್ತಿದ್ದರೂ ಆರೋಗ್ಯ ಇಲಾಖೆ ಕೈಕಟ್ಟಿಕುಳಿತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read