ಬೆಂಗಳೂರು : ಯಾವುದೇ ಕಾರಣಕ್ಕೂ ಬಡವರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.
ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿ ಅನುಷ್ಠಾನ ಮಾಡುತ್ತೇವೆಯೇ ವಿನಃ ನಿಲ್ಲಿಸುವ ಪ್ರಶ್ನೆಯೇ ಇಲ್ಲ. ಬಡವರ ಪರವಾದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಬಗ್ಗೆ ಯೋಚನೆಯನ್ನೂ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಗಡಿ ಶಾಸಕರಾದ ಬಾಲಕೃಷ್ಣ ಅವರ ಕಾಂಗ್ರೆಸ್ ಲೋಕಸಭೆಯಲ್ಲಿ ಗೆಲುವು ಸಾಧಿಸದಿದ್ದರೆ, ಗ್ಯಾರಂಟಿಗಳನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದರು. ಇದಕ್ಕೆ ಸಮರ್ಥನೆ ನೀಡಿದ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಖಂಡಿತ ಮುಂದುವರೆಸಲಾಗುವುದು ಎಂದರು.