ಬೆಂಗಳೂರು : ಬೆಂಗಳೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಜೆಇ ಲೋಕಾಯುಕ್ತ ( Lokayukta) ಬಲೆಗೆ ಬಿದ್ದಿದ್ದಾರೆ.
ಬೆಂಗಳೂರಿನ ವಿಜಯನಗರದ ಬೆಸ್ಕಾಂ ಕಚೇರಿಯಲ್ಲಿ ಪ್ರಕಾಶ್ ಎಂಬುವವರು ವ್ಯಕ್ತಿಯೊಬ್ಬರಿಂದ 1.5 ಲಕ್ಷ ಲಂಚ ಸ್ವೀಕರಿಸುತ್ತಿದ್ದರು. ಈ ವೇಳೆ ಅಧಿಕಾರಿ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದ್ದಿದ್ದಾರೆ.
ಮಂಜೇಶ್ ಎಂಬ ಗುತ್ತಿಗೆದಾರರಿಂದ ಬಹುಮಹಡಿ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು 2.5 ಲಕ್ಷ ಲಂಚಕ್ಕೆ ಬೇಡಿಕೆಯೊಡ್ಡಿದ್ದರು. ಅಂತೆಯೇ 1.5 ಲಕ್ಷ ಹಣ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಸ್ಕಾಂ ಜೆಇ ಪ್ರಕಾಶ್ ಅವರನ್ನು ವಶಕ್ಕೆ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.