ಬೆಂಗಳೂರು : ಮಾಜಿ ಸಚಿವ ರೇವಣ್ಣ ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಯೋಗಾನಂದ(38), ಅನಿಲ್(32) ಬಂಧಿತರು. ಕೊಲೆ ನಡೆದು 5 ತಿಂಗಳ ಬಳಿಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಯೋಗಾನಂದ ಹಣಕಾಸು ವಿಚಾರದ ಸೇಡಿನ ಹಿನ್ನೆಲೆ ಸುಫಾರಿ ಕೊಟ್ಟು ಆಪ್ತ ಕೃಷ್ಣೇಗೌಡ ರನ್ನು ಕೊಲೆ ಮಾಡಿಸಿದ್ದಾನೆ. ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ಆರೋಪಿಗಳ ವಿರುದ್ದ ಕೇಸ್ ದಾಖಲಿಸಿದ್ದರು. 12 ಆರೋಪಿಗಳ ಬಂಧನವಾಗಿದ್ದರೂ ಪ್ರಕರಣದ ಪ್ರಮುಖ ಆರೋಪಿಗಳು ತಲೆ ಮರೆಸಿಕೊಂಡಿದ್ದರು, ನಿನ್ನೆ ತುಮಕೂರು ಜಿಲ್ಲೆಯ ತುರುವೇಕರೆ ಬಳಿ ತೋಟದ ಮನೆಯಲ್ಲಿ ಅಡಗಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಹಾಗೂ ಹಾಸನ ಪೊಲೀಸರು ಬಂಧಿಸಿದ್ದಾರೆ.