ಬೆಂಗಳೂರು : ರಾಜ್ಯ ಸರ್ಕಾರ 15 ಮಂದಿ KAS ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿರುವ ಈ ಕೆಳಕಂಡ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.