ಬೆಂಗಳೂರು : ಶೀಘ್ರವೇ ರಾಜ್ಯದಲ್ಲಿ ಟೈಲರ್ ಗಳ ಕ್ಷೇಮನಿಧಿ ಮಂಡಳಿ ಸ್ಥಾಪನೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ ಟೈಲರ್ಗಳ ಕ್ಷೇಮನಿಧಿ ಮಂಡಳಿ ರಚನೆ ಬಗ್ಗೆ ಕಾರ್ಮಿಕ ಸಚಿವರ ಜತೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಟೈಲರ್ ಗಳ ಹಿತ ಕಾಪಾಡಲು ರಾಜ್ಯ ಸರ್ಕಾರ ಬದ್ಧವಾಗಿದ್ದು. ಶೀಘ್ರದಲ್ಲಿ ಟೈಲರ್ ಗಳ ಕ್ಷೇಮನಿಧಿ ಮಂಡಳಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.