ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2023-24 ನೇ ಸಾಲಿನಲ್ಲಿ ಬ್ಯಾಟರಿ ಚಾಲಿತ ವ್ಹೀಲ್‍ಚೇರಗಾಗಿ 15 ವರ್ಷ ಮೇಲ್ಪಟ್ಟ ದೈಹಿಕ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಈ ಹಿಂದೆ ಯಾವುದೇ ಮೂಲದಿಂದ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆದಿರಬಾರದು. ಫೆಬ್ರವರಿ 10, 2024 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಸೂಕ್ತ ದಾಖಲಾತಿಗಳೊಂದಿಗೆ ತಾಲೂಕಾ ಪಂಚಾಯತಿಯ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಗೆ (ಎಂ.ಆರ್.ಡಬ್ಲ್ಯೂ) ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ. 0836-2744474 ಧಾರವಾಡ-9742757903, ಹುಬ್ಬಳ್ಳಿ-9164347001, ಕಲಘಟಗಿ-6363695794, ನವಲಗುಂದ-9663271200 ಮತ್ತು ಕುಂದಗೋಳ-8880570833 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.