ರಾಂಚಿ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಅವರಿಗೆ ಹೇಮಂತ್ ಸೊರೆನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ರಾಂಚಿಯ ಸಿಎಂ ನಿವಾಸದಲ್ಲಿ ಸುಮಾರು 7 ಗಂಟೆಗಳ ಕಾಲ ಹೇಮಂತ್ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ಬಂಧನಕ್ಕೆ ಮುನ್ನ ರಾಜಭವನ ಸಿಎಂ ನಿವಾಸದ ಬಳಿ ಸೆಕ್ಷನ್ 144 ಜಾರಿಗೊಳಿಸಲಾಗಿತ್ತು.
ಹೈಡ್ರಾಮಾದ ಬಳಿಕ ಹೇಮಂತ್ ಸೊರೆನ್ ಅವರನ್ನು ಬಂಧಿಸಲಾಗಿದೆ. ಹೇಮಂತ್ ರಾಜೀನಾಮೆ ಹಿನ್ನೆಲೆಯಲ್ಲಿ ಜೆಎಂಎಂ ಶಾಸಕಾಂಗ ನಾಯಕರಾಗಿ ಚಂಪೈ ಸೊರೆನ್ ಅವರನ್ನು ಆಯ್ಕೆ ಮಾಡಲಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗಗಳ ಕಲ್ಯಾಣ, ಸಾರಿಗೆ ಸಚಿವರಾದ ಚಂಪೈ ಸೊರೆನ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಿದ್ದು, ರಾಜ್ಯಪಾಲರ ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ.