BIG NEWS : ಮಲ ಹೊರಿಸಿದ್ರೆ ಮುಲಾಜಿಲ್ಲದೆ ಕ್ರಮ : ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಬೆಂಗಳೂರು : ರಾಜ್ಯದಲ್ಲಿ ಮಲ ಹೊರುವ ಪದ್ಧತಿಯನ್ನು ನಿಷೇಧಿಸಿ ದಶಕಗಳೇ ಕಳೆದಿದ್ದರೂ ರಾಜ್ಯದಲ್ಲಿ ಅಲ್ಲಲ್ಲಿ ಈ ಅನಿಷ್ಟ ಪದ್ಧತಿ ಜೀವಂತವಾಗಿದೆ. ಕಾನೂನು ನಿರ್ಬಂಧವಿದ್ದರೂ ಮಲ ಹೊರುವ ಪದ್ಧತಿ ನಡೆಸುತ್ತಿರುವ ತಪ್ಪಿತಸ್ಥರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಅಂಬೇಡ್ಕರ್‌ ಭವನದಲ್ಲಿ ಕರ್ನಾಟಕ ರಾಜ್ಯ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಆಯೋಗದ ವತಿಯಿಂದ ನಡೆದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಸಹಾಯಧನ ವಿತರಣೆ ಮತ್ತು ಪುನರ್ವಸತಿ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಇರಕೂಡದು. ಯಾರಾದರೂ ಮ್ಯಾನ್ಯುಯಲ್ ಕೆಲಸ ಮಾಡಿಸಿದರೆ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.‌

ಪೌರ ಕಾರ್ಮಿಕರು ಘನತೆಯಿಂದ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ನಮ್ಮ ಪಕ್ಷದ ಮತ್ತು ನಮ್ಮ ಬದ್ಧತೆ. ಹೀಗಾಗಿ ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೇ ಸಫಾಯಿ ಕರ್ಮಚಾರಿಗಳ ಸಂಬಳವನ್ನು 7 ಸಾವಿರದಿಂದ 17 ಕ್ಕೆ ಏರಿಸಿದ್ದೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಅವಕಾಶವೇ ಇಲ್ಲ ಎಂದರು.

ಸಫಾಯಿ ಕರ್ಮಚಾರಿಗಳು ಮನೆ ಕಟ್ಟಿಕೊಳ್ಳಲು 7.5 ಲಕ್ಷ ನೆರವು ನೀಡುವ ಕಾರ್ಯಕ್ರಮವನ್ನೂ ಜಾರಿಗೆ ತಂದಿದ್ದು ನಮ್ಮ ಸರ್ಕಾರವೇ. ನಾನು ಮುಖ್ಯಮಂತ್ರಿಯಾಗಿ‌ ಈ ಕಾರ್ಯಕ್ರಮಗಳನ್ನು ಜಾರಿ‌ ಮಾಡಿದೆ. ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ.ಮಹದೇವಪ್ಪ, ಮಳವಳ್ಳಿ ಶಾಸಕ ನರೇಂದ್ರಸ್ವಾಮಿ, ಮಾಯಕೊಂಡ ಶಾಸಕರಾದ ಬಸಂತಪ್ಪ, ನೆಲಮಂಗಲ ಶಾಸಕರಾದ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read