HomeKarnatakaವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಮನೆ ವಿತರಣೆ

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನ ತಿಂಗಳು ಮನೆ ವಿತರಣೆ

ಬೆಂಗಳೂರು: ಮುಂದಿನ ತಿಂಗಳು ಫಲಾನುಭವಿಗಳಿಗೆ ವಿತರಣೆ ಆಗುವ ಕೊಳಗೇರಿ ಅಭಿವೃದ್ಧಿ ಮಂಡಳಿ ಮನೆಗಳ ಕಾಮಗಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಪರಿಶೀಲಿಸಿದ್ದಾರೆ.

ಕೆಆರ್ ಪುರದ ನಾಗೇನಹಳ್ಳಿಯಲ್ಲಿ ನಿರ್ಮಿಸುತ್ತಿರುವ 800, ಸರ್ವಜ್ಞ ನಗರ ಕ್ಷೇತ್ರದ ಚಟ್ಟಪ್ಪ ಗಾರ್ಡನ್ ನಲ್ಲಿ ನಿರ್ಮಿಸುತ್ತಿರುವ 209 ಮನೆಗಳ ಕಾಮಗಾರಿಯನ್ನು ಫೆಬ್ರವರಿ 29ರೊಳಗೆ ಪೂರ್ಣಗೊಳಿಸಲು ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿಯಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಬಡವರಿಗೆ ನಿರ್ಮಿಸುತ್ತಿರುವ 2.32 ಲಕ್ಷ ಮನೆಗಳಲ್ಲಿ ಮೊದಲ ಹಂತದಲ್ಲಿ 4000 ಮನೆಗಳನ್ನು ಏಕಕಾಲದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ, ಆಯುಕ್ತ ವೆಂಕಟೇಶ್ ಮೊದಲಾದವರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular