![](https://kannadadunia.com/wp-content/uploads/2023/08/krishna-byre-gowda.png)
ಹುಬ್ಬಳ್ಳಿ : ರಾಜ್ಯದ 31 ತಾಲೂಕುಗಳಲ್ಲಿ ಭೂ ಸುರಕ್ಷಾ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದ 31 ತಾಲೂಕಿನ ತಹಶೀಲ್ದಾರ್ ಕಚೇರಿಗಳಲ್ಲಿ ಭೂ ಸುರಕ್ಷಾ ಯೋಜನೆ ಜಾರಿಗೆ ಕ್ರಮ ವಹಿಸಲಾಗಿದೆ. ಕಂದಾಯ ಇಲಾಖೆಯ ಹಳೆಯ ದಾಖಲೆ ಸೇರಿದಂತೆ ಎಲ್ಲ ದಾಖಲೆಗಳ ಡಿಜಿಟಲೀಕರಣ ಮಾಡಲು ಭೂ ಸುರಕ್ಷಾ ಯೋಜನೆ ಜಾರಿ ಮಾಡಲಾಗುತ್ತದೆ ಎಂದರು.
ಪ್ರತಿ ಜಿಲ್ಲೆಗೊಂದು ತಾಲೂಕು ಆಯ್ಕೆ ಮಾಡಿಕೊಂಡು ಭೂ ಸುರಕ್ಷಾ ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ನಂತರ ಇತರ ತಾಲೂಕಿನಲ್ಲಿ ಜಾರಿ ಮಾಡಲಾಗುತ್ತದೆ. ಉಪನೋಂದಣಿ ಅಧಿಕಾರಿ ಕಚೇರಿಯಲ್ಲಿನ ದಾಖಲೆ, ಸರ್ವೆ ಇಲಾಖೆ ದಾಖಲೆಗಳನ್ನೂ ಭೂ ಸುರಕ್ಷಾ ಯೋಜನೆಯಡಿ ಡಿಜಿಟಲೀಕರಣ ಮಾಡುತ್ತೇವೆ ಎಂದು ತಿಳಿಸಿದರು.