ನವದೆಹಲಿ: ಗುಜರಾತ್ ನ ಕಛ್ ಪ್ರದೇಶದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.1 ರಷ್ಟು ತೀವ್ರತೆ ದಾಖಲಾಗಿದೆ.
ವರದಿಗಳ ಪ್ರಕಾರ, ಗುಜರಾತ್ನ ಕಛ್ ಪ್ರದೇಶದಲ್ಲಿ ಗುರುವಾರ ಬೆಳಿಗ್ಗೆ ರಿಕ್ಟರ್ ಮಾಪಕದಲ್ಲಿ 4.1 ರಷ್ಟು ಲಘು ಭೂಕಂಪ ಸಂಭವಿಸಿದೆ. ಭೂಕಂಪದಿಂದಾಗಿ ಕೆಲವು ಸೆಕೆಂಡುಗಳ ಕಾಲ ನಡುಕ ಕಂಡುಬಂದಿದೆ. ಈವರೆಗೂ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ.