ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್ : ಮತ್ತೊಂದು ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್

ಬೆಂಗಳೂರು : ನಟ ಶಿವರಾಜ್ ಕುಮಾರ್ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಇದೀಗ ಶಿವಣ್ಣ ನಟನೆಯ ಹೊಸ ಚಿತ್ರದ ರಿಲೀಸ್ ಡೇಟ್ ಫಿಕ್ಸ್ ಆಗಿದೆ.

ಶಿವರಾಜ್ ಕುಮಾರ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ಕರಟಕ-ಧಮನಕ’ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಈ ಸಿನಿಮಾ ಶಿವರಾತ್ರಿ ದಿನದಂದು , ಮಾರ್ಚ್ 8 ರಂದು ಬಿಡುಗಡೆ ಆಗಲಿದೆ.

ಅತ್ಯಂತ ನೀಚ ಬುದ್ಧಿಯ, ಕುತಂತ್ರೀ ಬುದ್ಧಿಯ ನರಿಗಳನ್ನು ಕರಟಕ, ಧಮನಕ ಎಂದು ಕರೆಯುತ್ತಿದ್ದರೆಂದು ಪುರಾಣಗಳಲ್ಲಿ ಉಲ್ಲೇಖಗಳಿವೆ. ನಮ್ಮ ಸಿನಿಮಾ ಸಹ ಅಂಥಹದೇ ಕುತಂತ್ರಿಗಳಿಬ್ಬರ ಕಥೆಯಾಗಿದೆಯಂತೆ. ನಟ ಶಿವರಾಜ್ ಕುಮಾರ್ ಜೊತೆ ಪ್ರಭುದೇವ್ ಕೂಡ ನಟಿಸಿದ್ದಾರೆ.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ತಯಾರಾಗಿರುವ, ಯೋಗರಾಜ್ ಭಟ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಯೋಗರಾಜ್ ಭಟ್ ಸಿನಿಮಾ ಎಂದಾಕ್ಷಣ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ.
ಶಿವರಾಜಕುಮಾರ್, ಪ್ರಭುದೇವ, ರವಿಶಂಕರ್, ತನಿಕೆಲ್ಲ ಭರಣಿ, ರಂಗಾಯಣ ರಘು, ಪ್ರಿಯಾ ಆನಂದ್, ನಿಶ್ವಿಕಾ ನಾಯ್ಡು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read