HomeKarnatakaBIG NEWS : 'ಗೃಹಜ್ಯೋತಿ' ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ :...

BIG NEWS : ‘ಗೃಹಜ್ಯೋತಿ’ ಫಲಾನುಭವಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್

ಬೆಂಗಳೂರು : ಗೃಹಜ್ಯೋತಿ ಫಲಾನುಭವಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಇನ್ಮುಂದೆ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್ ನೀಡಲಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದು, ಗೃಹಜ್ಯೋತಿ ಯೋಜನೆಯಡಿ ಮಾಸಿಕ 48 ಯುನಿಟ್ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವ 70 ಲಕ್ಷ ಗ್ರಾಹಕರಿಗೆ ಇನ್ನುಮುಂದೆ ಮಾಸಿಕ 10% ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯುನಿಟ್ ಹೆಚ್ಚುವರಿ ಉಚಿತ ವಿದ್ಯುತ್.ಪ್ರತಿ ಮನೆಗೆ ಭರವಸೆಯ ಬೆಳಕು ಹರಿಸುವ ಸರ್ಕಾರದ ಕಾರ್ಯಕ್ರಮ ಈಗ ಇನ್ನಷ್ಟು ಜನಸ್ನೇಹಿ ಎಂದು ಪೋಸ್ಟ್ ಮಾಡಿದ್ದಾರೆ.

ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಮಾಸಿಕ ಅರ್ಹ 48 ಯೂನಿಟ್ಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇ. 10 ರಷ್ಟು ಹೆಚ್ಚುವರಿ ವಿದ್ಯುತ್ಗೆ ಬದಲಾಗಿ 10 ಯೂನಿಟ್ ಹೆಚ್ಚುವರಿ ಉಚಿತ ವಿದ್ಯುತ್.ಸರಾಸರಿ 48 ಯೂನಿಟ್ ಗಿಂತ ಕಡಿಮೆ ಬಳಸುವ ಸುಮಾರು 70 ಲಕ್ಷ ಗ್ರಾಹಕರಿಗೆ ಇದರಿಂದ ಪ್ರಯೋಜನ ಸಿಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರದ ನಿರ್ಧಾರದಿಂದ ಅತ್ಯಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಇನ್ನು ಮುಂದೆ ಸಂಪೂರ್ಣ ಶೂನ್ಯ ಬಿಲ್ ಸಿಗಲಿದೆ. ರಾಜ್ಯ ಸರ್ಕಾರ ಇದಕ್ಕೆ ವಾರ್ಷಿಕ 398 ಕೋಟಿ ರೂ.ಗಳ ಹೆಚ್ಚುವರಿ ಸಹಾಯಧನ ನೀಡಲಿದೆ. ನುಡಿದಂತೆನಡೆದಿದ್ದೇವೆ…ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular