ನವದೆಹಲಿ: ಒಂದು ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
2024ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಭಾಷಣ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಮಫ್ತ್ ಬಿಜ್ಲಿ ಯೋಜನೆಯಡಿ 1 ಕೋಟಿ ಹೊಸ ಮನೆಗಳಿಗೆ ಸೋಲಾರ್ ಸಂಪರ್ಕ ಕಲ್ಪಿಸಲು ನೆರವು ನೀಡಲಾಗುವುದು ಎಂದರು.
ಅಯೋಧ್ಯೆ ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಅದರ ನೆನಪಿಗಾಗಿ ಮೇಲ್ಛಾವಣಿ ಮೇಲೆ ಸೋಲಾರ್ ಸಂಪರ್ಕ ನೆರವು ನೀಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ಇದನ್ನು ಬಜೆಟ್ ನಲ್ಲಿ ಅನುಷ್ಠಾನ ಗೊಳಿಸಲಾಗುತ್ತಿದ್ದು, ಇದರಿಂದ 300 ಯೂನಿಟ್ ವಿದ್ಯುತ್ ಉಳಿತಾಯವಾಗಲಿದೆ. ಇದು ಒಂದು ರೀತಿ ಉಚಿತ ವಿದ್ಯುತ್ ನೀಡಿದಂತೆ. ಇದರಿಂದ ಕುಟುಂಬಗಳು ವಾರ್ಷಿಕ 15-18 ಸಾವಿರ ವರೆಗೂ ಉಳಿತಾಯ ಮಾಡಬಹುದಾಗಿದೆ ಎಂದು ಹೇಳಿದರು.