ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಆನೇಕಲ್ನ ರಾಜ್ಯ ಗಡಿಭಾಗ ತಮಿಳುನಾಡಿನ ಥಳಿಯಲ್ಲಿ ಘಟನೆ ನಡೆದಿದೆ.
ತಮಿಳುನಾಡಿನ ಥಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಂಪತಿ ಈ ದುಡುಕಿನ ನಿರ್ಧಾರ ಕೈಗೊಂಡಿದೆ, ದಂಪತಿಗೆ ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ದಂಪತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿದೆ. ಥಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.