ಬೆಂಗಳೂರು : ರಾಜ್ಯದ ಸಹಕಾರ ಸಂಸ್ಥೆ ಮೂಲಕ ಸಾಲ ಪಡೆದು ಸುಸ್ತಿಯಾಗಿರುವ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸಾಲಗಳ ಅಸಲು ಪಾವತಿಸಿದಲ್ಲಿ ಅದರ ಮೇಲಿನ ಬಡ್ಡಿಯನ್ನು ಮನ್ನಾ ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಇತ್ತೀಚೆಗೆ ಘೋಷಣೆ ಮಾಡಿದ್ದರು. ಇದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ಹೌದು. ರಾಜ್ಯದ ರೈತರು ಸಹಕಾರ ಸಂಘಗಳಲ್ಲಿ ಮಾಡಿರುವಂತ ಸಾಲದ ಅಸಲು ಪಾವತಿ ಮಾಡಿದರೆ ಅದರ ಬಡ್ಡಿ ಮನ್ನಾ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದರು. ಅಂತೆಯೇ ಇಂದು ಈ ಬಗ್ಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಡತ ಮಂಡಿಸಿ ಅನುಮೋದನೆಯನ್ನು ಪಡೆಯಲಾಗಿದೆ.
ಸಹಕಾರಿ ಸಮೃದ್ಧ ಸೌಧ ನಿರ್ಮಾಣಕ್ಕೆ ಒಪ್ಪಿಗೆ. ಸಹಕಾರ ಸಂಘಗಳ ಮೂಲಕ ಸಾಲ ಸೌಲಭ್ಯ. ಸಾಲ ಪಡೆದ ರೈತರ ಸುಸ್ತಿಬಡ್ಡಿ ಮನ್ನಾ. ಮಧ್ಯಮಾವಧಿ, ಧೀರ್ಘಾವದಿ ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತದೆ. ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಅನುಮೋದನೆ ನೀಡಲಾಗುತ್ತದೆ. 440 ಕೋಟಿ 20 ಲಕ್ಷ ಸುಸ್ತಿ ಬಡ್ಡಿ ಮನ್ನಾ. ಸಹಕಾರಿ ಸಂಘಗಳಿಂದ ಪಡೆದಿದ್ದ ಸಾಲದ ಮೇಲಿನ ಬಡ್ಡಿ, ಸುಸ್ತಿ ಬಡ್ಡಿ ಮನ್ನಾ ಮಾಡಲಾಗುತ್ತಿದೆ ಎಂದು ಸಚಿವ ಸಂಪುಟ ಸಭೆ ಬಳಿಕ ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದಾರೆ.