ಬೆಂಗಳೂರು : ಇಂದು ಕೇಂದ್ರ ಸರ್ಕಾರ ಮಂಡಿಸಿದ ಮಧ್ಯಂತರ ಬಜೆಟ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಕೃಷಿ, ಹೂಡಿಕೆ, ಉದ್ಯಮ ಸೃಷ್ಟಿಗೆ ಇದು ಬೆಸ್ಟ್ ಬಜೆಟ್ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕುಮಾರಸ್ವಾಮಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ ಬೆಳೆಗೆ ಉತ್ತೇಜನ, ಉದ್ಯೋಗ ಸೃಷ್ಟಿ, ಯುವ ಉದ್ಯಮಿಗಳಿಗೆ ಪ್ರೋತ್ಸಾಹ, ಉತ್ಪಾದನೆಗೆ ಒತ್ತು ಇತ್ಯಾದಿ ಕಮಗಳು ಸ್ವಾಗತಾರ್ಹ. ಹಾಗೆಯೇ ದೇಶೀಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಕಲ್ಪ ಮಾಡಿ ಲಕ್ಷದ್ವೀಪ ಸೇರಿ ರಾಜ್ಯದ ಕರಾವಳಿ ಪ್ರವಾಸೋದ್ಯಮದ ಬೆಳವಣಿಗೆಗೆ ಮನ್ನಣೆ ಹಾಕಲಾಗಿದೆ.
ನನ್ನ ಅಭಿಪ್ರಾಯದ ಪ್ರಕಾರ ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್. ಪ್ರಧಾನಿ ಮೋದಿ ಅವರ ದೂರದೃಷ್ಟಿ ಈ ಆಯವ್ಯಯದಲ್ಲಿ ಅಡಗಿದೆ ಎಂದು H.D ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.